ಚಿನ್ನದ ಹುಡುಗನಿಂದ ಇತಿಹಾಸ ಸೃಷ್ಟಿ: ಲೌಸಾನೆ ಡೈಮಂಡ್ ಲೀಗ್ ಮೀಟ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ನೀರಜ್ ಚೋಪ್ರಾ

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ಲೌಸನ್ನೆ ಡೈಮಂಡ್ ಲೀಗ್‌ನಲ್ಲಿ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ 89.08 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ ಪ್ರಶಸ್ತಿ ಗೆದ್ದಿದ್ದಾರೆ. ಈವೆಂಟ್‌ನಲ್ಲಿ ಅವರ ಅತ್ಯುತ್ತಮ ಎಸೆತದೊಂದಿಗೆ, ನೀರಜ್ ಪ್ರತಿಷ್ಠಿತ ಡೈಮಂಡ್ ಲೀಗ್ ಮೀಟ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯರೆನ್ನುವ ಇತಿಹಾಸ ಸೃಷ್ಟಿಸಿದ್ದಾರೆ.

ನೀರಜ್ ಅವರು ಸೆಪ್ಟೆಂಬರ್ 7 ಮತ್ತು 8 ರಿಂದ ಸ್ವಿಟ್ಜರ್ಲೆಂಡ್‌ನ ಜ್ಯೂರಿಚ್‌ನಲ್ಲಿ ನಡೆಯಲಿರುವ ಡೈಮಂಡ್ ಲೀಗ್ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಅವರು ಈಗ 2023 ರ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದ್ದಾರೆ. ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಡೈಮಂಡ್ ಲೀಗ್ ಕೂಟವನ್ನು ಗೆದ್ದ ಮೊದಲ ಭಾರತೀಯರಾಗಿರುವ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಅವರನ್ನು ಈ ಸಾಧನೆಗಾಗಿ ಅಭಿನಂದಿಸಿದ್ದಾರೆ.

ಚಿನ್ನದ ಹುಡುಗನಿಗೆ ನೀರಜ್ ಚೋಪ್ರಾ ಅವರಿಗೆ ದೇಶಾದ್ಯಂತದ ಅಭಿಮಾನಿಗಳಿಂದ ಅಭಿನಂದನೆಗಳ ಮಹಾಪೂರವೆ ಹರಿದು ಬರುತ್ತಿದೆ.