ನವದೆಹಲಿ: ಭಾರತದ ಟೋಕಿಯೊ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಸೋಮವಾರ ಇತ್ತೀಚಿನ ಪುರುಷರ ಜಾವೆಲಿನ್ ಎಸೆತದ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದ್ದಾರೆ ಮತ್ತು ವಿಶ್ವ ಅಥ್ಲೆಟಿಕ್ಸ್ ಬಿಡುಗಡೆ ಮಾಡಿದ ಶ್ರೇಯಾಂಕದಲ್ಲಿ ಹೊಸ ವಿಶ್ವ ನಂ.1 ಆಗಿ ಹೊರಹೊಮ್ಮಿದ್ದಾರೆ. ಚೋಪ್ರಾ 1455 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಆಗಸ್ಟ್ 30, 2022 ರಿಂದ ಚೋಪ್ರಾ ನಂ.2 ಸ್ಥಾನದಲ್ಲಿದ್ದರು, ಆದರೆ ಈ ವಾರ ಹಾಲಿ ವಿಶ್ವ ಚಾಂಪಿಯನ್ ಪೀಟರ್ಸ್ ಅವರನ್ನು ಹಿಂದಿಕ್ಕಿ ನಂ.1 ಪಟ್ಟವನ್ನು ಅಲಂಕರಿಸಿದ್ದಾರೆ.