ಒಲಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಸ್ವಗ್ರಾಮದಲ್ಲಿ ಆತನದೇ ಹೆಸರಿನಲ್ಲಿ ಕ್ರೀಡಾಂಗಣವನ್ನು ನಿರ್ಮಿಸಲಾಗುವುದು ಎಂದು ಹರಿಯಾಣದ ಮುಖ್ಯ ಮಂತ್ರಿ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ.
ಭಾನುವಾರ (ಮೇ 1)ದಂದು ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರ ಸ್ವಗ್ರಾಮವಾದ ಪಾಣಿಪತ್ನಲ್ಲಿ ಕ್ರೀಡಾಂಗಣವನ್ನು ನಿರ್ಮಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಪಾಣಿಪತ್ನಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಉದ್ಘಾಟಿಸಿದ ನಂತರ ಮಾತನಾಡಿ, ಹರಿಯಾಣದ ನೀರಜ್ ಚೋಪ್ರಾ ಅವರು ಕಳೆದ ವರ್ಷ ಒಲಿಂಪಿಕ್ ಚಿನ್ನದ ಪದಕ ಗೆಲ್ಲುವ ಮೂಲಕ ದೇಶ ಮತ್ತು ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ನೀರಜ್ ಚೋಪ್ರಾ ಅವರ ಗ್ರಾಮದಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದರು.
ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರ ಹುಟ್ಟೂರು ಪಾಣಿಪತ್ನ ಖಂಡ್ರಾದಲ್ಲಿದೆ. ಕಳೆದ ವರ್ಷ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಚೋಪ್ರಾ ಹಲವಾರು ಯುವಕರಿಗೆ ಸ್ಪೂರ್ತಿಯಾಗಿದ್ದಾರೆ.