ಅಮೇರಿಕಾದ ಒರೆಗಾನ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಪುರುಷರ ಜಾವೆಲಿನ್ ಥ್ರೋ ನಲ್ಲಿ 88.39 ಮೀಟರ್‌ಗಳ ಎಸೆತದೊಂದಿಗೆ ಭಾರತ ನೀರಜ್ ಚೋಪ್ರಾ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ. ಒಲಿಂಪಿಕ್ ಚಿನ್ನದ ಪದಕ ವಿಜೇತ ಚೋಪ್ರಾ, ಅರ್ಹತಾ ಸುತ್ತಿನ ಮೊದಲ ಎಸೆತದಲ್ಲೇ ಫೈನಲ್‌ನ ತಮ್ಮ ಸ್ಥಾನವನ್ನು ಭದ್ರಪಡಿಸಿದ್ದಾರೆ.
ಅರ್ಹತಾ ಸುತ್ತಿನ ಎ ಗುಂಪಿನಲ್ಲಿ ಚೋಪ್ರಾ ಮೊದಲಿಗರಾಗಿ ಜಾವಲಿನ್ ಎಸೆದಿದ್ದಾರೆ. ನಾಳೆ ಮುಂಜಾನೆ ನಡೆಯಲಿರುವ ಫೈನಲ್‌ನಲ್ಲಿ 24 ವರ್ಷ ವಯಸ್ಸಿನ ಚೋಪ್ರಾ ಸ್ಪರ್ಧಿಸಲಿದ್ದಾರೆ. ನೀರಜ್ ಜೊತೆಗೆ ರೋಹಿತ್ ಯಾದವ್ ಕೂಡ ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ಆಡಲಿದ್ದಾರೆ. ಮೂವರು ಟ್ರಿಪಲ್ ಜಂಪ್ ಅಥ್ಲೀಟ್‌ಗಳಾದ ಎಲ್ದೋಸ್ ಪಾಲ್, ಪ್ರವೀಣ್ ಚಿತ್ರವೇಲ್ ಮತ್ತು ಅಬ್ದುಲ್ಲಾ ಅಬೂಬಕರ್ ಕೂಡ ಇಂದು ಕಣಕ್ಕಿಳಿಯಲಿದ್ದಾರೆ.
ಒಟ್ಟು 32 ಜಾವೆಲಿನ್ ಎಸೆತಗಾರರು ಎರಡು ಅರ್ಹತಾ ಗುಂಪುಗಳಲ್ಲಿ ಸ್ಪರ್ಧಿಸಲಿದ್ದಾರೆ. 12 ಅತ್ಯುತ್ತಮ ಅಥ್ಲೀಟ್‌ಗಳು ನಾಳೆ ನಡೆಯಲಿರುವ ಫೈನಲ್‌ಗೆ ಅರ್ಹತೆ ಪಡೆಯಲಿದ್ದಾರೆ. ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ್ತಿ ಅಣ್ಣು ರಾಣಿ ತನ್ನ ಮೂರನೇ ಹಾಗೂ ಅಂತಿಮ ಪ್ರಯತ್ನದಲ್ಲಿ 59.60 ಮೀಟರ್ ದೂರ ಎಸೆದು ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ರಾಷ್ಟ್ರೀಯ ದಾಖಲೆ ಹೊಂದಿರುವ ಆಟಗಾರ್ತಿ ಚಾಂಪಿಯನ್‌ಶಿಪ್‌ನಲ್ಲಿ ಸತತ ಎರಡನೇ ಬಾರಿ ಜಾವೆಲಿನ್ ಫೈನಲ್‌ಗೆ ತಲುಪಿದ್ದಾರೆ.