‘Gen-Z ಎಂದರೆ ಜನರೇಷನ್ ಗಟರ್’ ಎಂದ ಕಂಗನಾಗೆ ಕ್ಯಾಕರಿಸಿ ಉಗಿದ ನೆಟ್ಟಿಗರು, ರಾಜಕೀಯ ಮಾಡಿದ ನಟಿಗೆ Gen-Z ಗಳಿಂದಲೇ ಕ್ಲಾಸ್

ಮುಂಬೈ (ಜು. 28): ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಮತ್ತೊಮ್ಮೆ ತಮ್ಮ ಹೇಳಿಕೆಯಿಂದ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಇತ್ತೀಚಿನ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, Gen-Z ಯುವಜನತೆಯನ್ನು ಗುರಿಯಾಗಿಸಿಕೊಂಡು ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು ನೆಟ್ಟಿಗರು ರಾಜಕೀಯ ಮಾಡಿದ ನಟಿಗೆ ಕ್ಯಾಕರಿಸಿ ಉಗಿದಿದ್ದಾರೆ.

ದೆಹಲಿ ಜಂತರ್ ಮಂತರ್ ಸೇರಿದಂತೆ ವಿವಿಧೆಡೆ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಕಂಗನಾ, ಪ್ರತಿಭಟನಾಕಾರರು ಬಳಸಿದ ಭಾಷೆ, ಪೋಸ್ಟರ್‌ಗಳು ಹಾಗೂ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳನ್ನು ತೀವ್ರವಾಗಿ ಟೀಕಿಸಿದ್ದಾರೆ.

“ಇಷ್ಟು ಅಸಹ್ಯಕರ ದೃಶ್ಯಗಳನ್ನು ನಾನು ಎಂದಿಗೂ ನೋಡಿಲ್ಲ. ಈ ಪ್ರತಿಭಟನೆಗಳ ವಿಡಿಯೋಗಳನ್ನು ನೋಡಿದರೆ ವಾಂತಿ ಬರುತ್ತದೆ” ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಇದರ ಜೊತೆಗೆ, Gen-Z ಯುವಜನತೆಯನ್ನು “ಜನರೇಷನ್ ಗಟರ್” ಎಂದು ಉಲ್ಲೇಖಿಸಿರುವುದು ಮತ್ತಷ್ಟು ವಿವಾದಕ್ಕೆ ಕಾರಣವಾಗಿದೆ. ಕಂಗನಾ ಅವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಅನೇಕ ನೆಟ್ಟಿಗರು ಅವರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಕೆಲವರು ಕಂಗನಾ ಅವರ ಹೇಳಿಕೆಯನ್ನು ಯುವಜನತೆಯನ್ನು ಅವಮಾನಿಸುವಂತದ್ದು ಎಂದು ಟೀಕಿಸಿದ್ದು, ಮತ್ತಷ್ಟು ಮಂದಿ ಸಾರ್ವಜನಿಕ ಹುದ್ದೆಯಲ್ಲಿರುವ ವ್ಯಕ್ತಿಯಿಂದ ಇಂತಹ ಹೇಳಿಕೆಗಳು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಂಗನಾ ಅವರ ಈ ಹೊಸ ಹೇಳಿಕೆ ರಾಜಕೀಯ ಮತ್ತು ಸಿನಿಮಾ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕಂಗನಾ ವಿರುದ್ದ ಆಕ್ರೋಶ ಹೆಚ್ಚಾಗಿದೆ.