ಮಂದಾರ್ತಿ: ಮಂದಾರ್ತಿ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಶ್ರೀ ದುರ್ಗಾ ಸಹಕಾರ ಸೌಧದ ಉದ್ಘಾಟನಾ ಸಮಾರಂಭವು ನ.6 ರಂದು ಬೆಳಿಗ್ಗೆ 10.30 ಕ್ಕೆ ಮಂದಾರ್ತಿ ರಥಬೀದಿಯಲ್ಲಿ ನಡೆಯಲಿರುವುದು.
ಮಂದಾರ್ತಿ ಸೇವಾ ಸಹಕಾರಿ ಸಂಘವು ಕಳೆದ 98 ವರ್ಷಗಳಿಂದ ಸಹಕಾರಿ ಕ್ಷೇತ್ರಗಳ ಮೂಲಕ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಾ ಬಂದಿದ್ದು, ಸರಕಾರದ ಸವಲತ್ತುಗಳನ್ನು ಸದಸ್ಯರಿಗೆ ತಲುಪಿಸಿ ಅಭಿವೃದ್ದಿ ಪಥದಲ್ಲಿ ಮುನ್ನೆಡೆಯುತ್ತಿದೆ. ಸೇವೆಯನ್ನು ಆಧುನೀಕರಣಗೊಳಿಸುವ ಸಲುವಾಗಿ ಮಾಂದಾರ್ತಿಯ ಹೃದಯ ಭಾಗದಲ್ಲಿ ಸಂಪೂರ್ಣ ಹವಾನಿಯಂತ್ರಿತ ನೂತನ ಕಚೇರಿಯನ್ನು ನಿರ್ಮಾಣ ಮಾಡಲಾಗಿದ್ದು, ಕಟ್ಟಡದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಗಳ ಅಧ್ಯಕ್ಷ ಡಾ.ಎಮ್.ಎನ್ ರಾಜೇಂದ್ರ ಕುಮಾರ್ ರವರು ನೆರವೇರಿಸಲಿದ್ದಾರೆ.
ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಲಿತ ಮೊಕ್ತೇಸರ ಎಚ್. ಧನಂಜಯ್ ಶೆಟ್ಟಿ, ಉಡುಪಿ ಜಿಲ್ಲ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಂದಾರ್ತಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್ ಗಂಗಾಧರ ಶೆಟ್ಟಿ ಸಭಾದ್ಯಕ್ಷತೆ ವಹಿಸಲಿದ್ದಾರೆ.
ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಅಶೋಕ್ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ, ರಾಜೇಶ್ ರಾವ್, ಸಂಗೀತಾ ಎಸ್. ಕರ್ತಾ, ಶ್ರೀಮತಿ ಶೋಭಾ ಬಿ ಶೆಟ್ಟಿ, ಪಾಂಡುರಂಗ ಶೆಟ್ಟಿ, ಕುಮಾರಿ ರತ್ನಾ, ಲಕ್ಷ್ಮೀನಾರಾಯಣ ಜಿ.ಎನ್ ಮತ್ತು ಗಣೇಶ್ ಮಯ್ಯ ಉಪಸ್ಥಿತರಿರಲಿದ್ದಾರೆ.