ನವದೆಹಲಿ: ಹಳೆಯ ವಾಹನಗಳ ವಿಲೇವಾರಿಗೆ ಬಜೆಟ್‌ನಲ್ಲಿ ಸ್ಕ್ರ್ಯಾಪಿಂಗ್ ಪಾಲಿಸಿ (ಹಳೆಯ ವಾಹನಗಳನ್ನು ಗುಜರಿಗೆ ನೀಡಲು ನೀತಿ) ಹೊಸ ನೀತಿ ಘೋಷಿಸಲಾಗಿದೆ.
ಅದರಂತೆ ವೈಯಕ್ತಿಕ ವಾಹನಗಳಿಗೆ 20 ವರ್ಷಗಳ ಬಳಿಕ ಹಾಗೂ ವಾಣಿಜ್ಯ ವಾಹನಗಳಿಗೆ 15 ವರ್ಷಗಳ ಬಳಿಕ ಕ್ಷಮತಾ ಪರೀಕ್ಷೆ ನಡೆಸಲಾಗುತ್ತದೆ.
ಮಾಲಿನ್ಯ ಕಡಿಮೆ ಮಾಡುವ, ತೈಲ ಆಮದು ಹೊರೆ ತಗ್ಗಿಸುವ ನಿಟ್ಟಿನಲ್ಲಿ ಹಾಗೂ ಪರಿಸರಸ್ನೇಹಿ ವಾಹನಗಳನ್ನು ಉತ್ತೇಜಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.
ಈ ನೂತನ ಸ್ವಯಂಪ್ರೇರಿತ ಸ್ಕ್ರಾಪಿಂಗ್ ನಿಯಮದಂತೆ ಖಾಸಗಿ ವಾಹನಗಳನ್ನು 20 ವರ್ಷ ಹಳೆಯ ಖಾಸಗಿ ವಾಹನಗಳನ್ನು ಮತ್ತು 15ವರ್ಷಗಳ ಹಳೆಯ ವಾಣಿಜ್ಯ ಬಳಕೆ ವಾಹನಗಳನ್ನು ಸಂಪೂರ್ಣ ಪರಿಶೀಲನೆಗೆ ಒಡ್ಡಬೇಕು. ಅದರಲ್ಲಿ ಅವುಗಳ ಸಾಮರ್ಥ್ಯ ಕುಂದಿದ್ದು ಕಂಡುಬಂದರೆ ಸ್ವಯಂಪ್ರೇರಣೆಯಿಂದ ಮಾಲೀಕರು ಗುಜರಿಗೆ ಹಾಕಲೇಬೇಕಾಗುತ್ತದೆ.
ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ವಲಯದಲ್ಲಿರುವ 15ವರ್ಷಗಳಿಗಿಂತ ಹಳೆಯದಾದ ವಾಹನಗಳನ್ನು ಗುಜರಿಗೆ ಹಾಕುವ ನೀತಿಯನ್ನು ಶೀಘ್ರದಲ್ಲೇ ಜಾರಿಗೊಳಿಸಲಾಗುವುದು. 2022ರ ಏಪ್ರಿಲ್ 1ರಿಂದ ಅದು ಅಧಿಕೃತವಾಗಿ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಕಳೆದ ವಾರ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದರು.