ಬೈಂದೂರು: ಮರವಂತೆ ಮೀನುಗಾರರ ಸಹಕಾರ ಸಂಘ ನಿ., ಮರವಂತೆ ಬೈಂದೂರು,
ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಭಾಗವಹಿಸಿ ಶುಭ ಹಾರೈಸಿದರು.
ಸಮಾರಂಭವನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ ಎಂ ಸುಕುಮಾರ ಶೆಟ್ಟಿ ಉದ್ಘಾಟಿಸಿದರು.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಂಸ್ಥೆಯ ಅಧ್ಯಕ್ಷ ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.