ಉಡುಪಿ: ಇಲ್ಲಿನ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದಿಂದ ಕೊಡಮಾಡುವ ಪೊಳಲಿ ಶೀನಪ್ಪ ಹೆಗ್ಡೆ ಮತ್ತು ಎಸ್.ಆರ್. ಹೆಗ್ಡೆ ಪ್ರಶಸ್ತಿಗೆ ಜವಾಹರಲಾಲ್ ನೆಹರೂ
ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥ, ಜಾನಪದ ತಜ್ಞ ಹಾಗೂ ಸಂಸ್ಕೃತಿ
ಚಿಂತಕ ಡಾ. ಪುರುಷೋತ್ತಮ ಬಿಳಿಮಲೆ ಅವರು ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₨20 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಆಗಸ್ಟ್
ತಿಂಗಳ ಮೊದಲ ವಾರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರದ ಸಂಯೋಜಕ
ಪ್ರೊ. ವರದೇಶ ಹಿರೇಗಂಗೆ ತಿಳಿಸಿದ್ದಾರೆ.