ಉಡುಪಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 2019-20 ನೇ ಶೈಕ್ಷಣಿಕ ಸಾಲಿಗಾಗಿ ಒಂದನೇ ತರಗತಿಯಿಂದ ಅಂತಿಮ ಪದವಿ / ಡಿಪ್ಲೋಮಾ ಮತ್ತು ವೃತ್ತಿಪರ ಪದವಿವರೆಗೆ ಕರ್ನಾಟಕದಲ್ಲಿರುವ ಹಾಗೂ ಸರಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯ ವೇತನ ಮಂಜೂರು ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು, ಇಲ್ಲಿ ಜೂನ್ 10 ರ ನಂತರ ಪಡೆಯಬಹುದು. ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ / ಡಿಪ್ಲೋಮಾವರೆಗೆ ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಸೆಪ್ಟೆಂಬರ್ 30 ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಅರ್ಜಿಯನ್ನು ಸ್ವೀಕರಿಸಲು ನವೆಂಬರ್ 30 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಅನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

















