ಅಂಬಲಪಾಡಿ: ವಿದ್ಯಾಪೋಷಕ್‌ ವಿದ್ಯಾರ್ಥಿಗಳ ಸನಿವಾಸ ಶಿಬಿರದ ಸಮಾರೋಪ ಸಮಾರಂಭ

ಉಡುಪಿ: ವಿದ್ಯಾರ್ಥಿಗಳು ನಮ್ಮ ಸಂಸ್ಕೃತಿ, ಸಂಸ್ಕಾರದ ಜತೆಗೆ ಸಾತ್ವಿಕ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡಲ್ಲಿ, ರೋಗಗಳಿಂದ ದೂರವಿರಲು ಸಾಧ್ಯವಿದೆ ಎಂದು ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳ್‌ ಹೇಳಿದರು.

ಯಕ್ಷಗಾನ ಕಲಾರಂಗದ ವತಿಯಿಂದ ಅಂಬಲಪಾಡಿ ದೇಗುಲದ ಭವಾನಿ ಮಂಟಪದಲ್ಲಿ ಬುಧವಾರ ನಡೆದ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್‌ ವಿದ್ಯಾರ್ಥಿಗಳ ಸನಿವಾಸ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೈಹಿಕ ಆರೋಗ್ಯ ಹಾಗೂ ಪರಿಸರ ಸ್ವಚ್ಛತೆಗೆ ಹೆಚ್ಚಿನ ಗಮನಕೊಡಬೇಕು. ಮಕ್ಕಳು ಋಣಾತ್ಮಕ ವಿಷಯಗಳಿಂದ ದೂರವಿದ್ದು, ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಬೆಂಗಳೂರು ಯಕ್ಷ ದೇಗುಲ ಅಧ್ಯಕ್ಷ ಬಾಲಕೃಷ್ಣ ಭಟ್‌ ಮಾತನಾಡಿದರು. ಮೈ ಲೈಫ್‌- ಸಂಸ್ಥೆಯ ಪ್ರವೀಣ್‌ ಗುಡಿ, ನಿವೃತ್ತ ಬಿಎಸ್‌ಎನ್‌ಎಲ್‌ ಅಧಿಕಾರಿ
ಸತ್ಯನಾರಾಯಣ ಪುರಾಣಿಕ್‌, ನಿವೃತ್ತ ಪ್ರಾಂಶುಪಾಲೆ ತಾರಾದೇವಿ, ಕಲಾರಂಗ ಅಧ್ಯಕ್ಷ ಕೆ. ಗಣೇಶ್‌ ರಾವ್‌, ಉಪಾಧ್ಯಕ್ಷ ಕಿಶನ್‌ ಹೆಗ್ಡೆ ಕೊಳ್ಕೆಬೈಲು, ಕಾರ್ಯದರ್ಶಿ ಮುರಲಿ
ಕಡೆಕಾರ್‌, ಗಂಗಾಧರ ರಾವ್ ಉಪಸ್ಥಿತರಿದ್ದರು.