ಉಡುಪಿ: ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾಡಳಿತ ಉಡುಪಿ ಜಿಲ್ಲೆ ಹಾಗೂ ಕುಂದಾಪುರ ಪುರಸಭೆ ಜಂಟಿಯಾಗಿ ಶುಕ್ರವಾರ ಶಾಸ್ತ್ರೀ ಸರ್ಕಲ್ ಬಸ್ ನಿಲ್ದಾಣದಲ್ಲಿ ಮತದಾನ ಅರಿವು ಕಾರ್ಯಕ್ರಮದ ಅಂಗವಾಗಿ ಬೀದಿ ನಾಟಕ ಹಮ್ಮಿಕೊಳ್ಳಲಾಯಿತು. ಪಾತ್ರದಾರಿಗಳ ಮನೋಜ್ಞ ಅಭಿನಯದಿಂದಾಗಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.