ಕುಂದಾಪುರ: ಮಹಾಘಟ್‌ಬಂಧನ್ ಈಗಾಗಲೇ ಛಿದ್ರವಾಗಿದೆ. ಇದಕ್ಕೆ ರಾಜ್ಯದಲ್ಲಿರುವ ಮೈತ್ರಿ ಸರಕಾರದಲ್ಲಿರುವ ಗೊಂದಲಗಳೇ ಮೊದಲ ವೈಫಲ್ಯ. ದೇಶದ ಭದ್ರತೆ ದೃಷ್ಟಿಯಿಂದ ಮೋದಿ ಸರ್ಕಾರವನ್ನು ಬೆಂಬಲಿಸಿ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹೇಳಿದರು.
ಅವರು ಗುರುವಾರ ಕುಂದಾಪುರದ ಕೋರ್ಟ್‌ನಲ್ಲಿ ಬಾರ್ ಅಸೋಸಿಯೇಶನ್ ಸದಸ್ಯರ ಬಳಿ ಮತಯಾಚಿಸಿದ ಬಳಿಕ ಮಾತನಾಡಿದರು.
ಉಡುಪಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಮತ್ತೊಮ್ಮೆ ಗೆಲ್ಲಿಸಿದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ದೇಶದ ಹಿತ ಕಾಯಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೇರಿಸಬೇಕಿದೆ. ಅದ್ಕಕಾಗಿ ನನಗೆ ಮತ ನೀಡಿ ಎಂದರು.
ಬಾರ್ ಅಸೋಸಿಯೇಶನ್ ಅಧ್ಯಕ್ಷ ನಿರಂಜನ್ ಹೆಗ್ಡೆ ಸಳ್ವಾಡಿ, ಪದಾಧಿಕಾರಿಗಳು, ಸದಸ್ಯರು, ವಕೀಲರು, ಬಿಜೆಪಿ ಕ್ಷೇತ್ರಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಪ್ರಧಾನ ಕಾರ್‍ಯದರ್ಶಿ ಭಾಸ್ಕರ ಬಿಲ್ಲವ, ಜಿಲ್ಲಾ ಪ್ರಧಾನ ಕಾರ್‍ಯದರ್ಶಿ ಸಂಧ್ಯಾ ರಮೇಶ್, ಯುವ ಮೋರ್ಚಾ ಅಧ್ಯಕ್ಷ ಸತೀಶ್ ಪೂಜಾರಿ, ಪುರಸಭಾ ಸದಸ್ಯರಾದ ಮೋಹನ್‌ದಾಸ್ ಶೆಣೈ, ಪ್ರಭಾಕರ್, ಸಂತೋಷ್ ಶೆಟ್ಟಿ, ಗಿರೀಶ್ ದೇವಾಡಿಗ, ಅಶ್ವಿನಿ ಪ್ರದೀಪ್, ರೋಹಿಣಿ ಉದಯ ಕುಮಾರ್, ಶ್ವೇತಾ ಸತೋಷ್, ಮಹಿಳಾ ಮೋರ್ಚಾ ಅಧ್ಯಕ್ಷೆ ಗುಣರತ್ನಾ ಮತ್ತಿತರರು ಉಪಸ್ಥಿತರಿದ್ದರು.
ಬಾರ್ ಅಸೋಸಿಯೇಶನ್ ಪ್ರ. ಕಾರ್‍ಯದರ್ಶಿ ಪ್ರಮೋದ್ ಹಂದೆ ಸ್ವಾಗತಿಸಿದರು.