ಉಡುಪಿ: ಶಾಸಕ ಕೆ ರಘುಪತಿ ಭಟ್ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಜೊತೆ ಉಡುಪಿ ಜಿಲ್ಲೆಯ ಸಮಸ್ಯೆ ಮತ್ತು ಅಭಿವೃದ್ಧಿ ಚಟುವಟಿಕೆಯ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಚರ್ಚೆ-ಸಭೆ ಗುರುವಾರ ನಡೆಯಿತು.
ಈ ತಿಂಗಳ ೨೦ ರ ಒಳಗೆ ಮರಳುಗಾರಿಕೆಗೆ ಆರಂಭಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದರು. ಜೊತೆಗೆ ಜಿಲ್ಲೆಯ 9/11ಎ,11ಬಿ,ಕ್ರಷರ್ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠೆ ನಿಶಾ ಜೇಮ್ಸ್, ಶಾಸಕರುಗಳಾದ ವಿ ಸುನಿಲ್ ಕುಮಾರ್, ಲಾಲಾಜಿ ಮೆಂಡನ್, ಸುಕುಮಾರ್ ಶೆಟ್ಟಿ, ಹಾಲಾಡಿ ಶ್ರೀನಿವಾಸ ಶೆಟ್ಟಿ,ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಉಪಸ್ಥಿತರಿದ್ದರು