ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುದ್ದೆ– ಅರ್ಜಿ ಆಹ್ವಾನ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಇಲ್ಲಿ ಖಾಲಿ ಇರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುದ್ದೆಯನ್ನು  ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಿವೃತ್ತರಾಗಿರುವ ಪತ್ರಾಂಕಿತ ಅಧಿಕಾರಿಗಳಾಗಿರಬೇಕು ಮತ್ತು ಸಂಸ್ಥೆಗಳಲ್ಲಿ ಕನಿಷ್ಟ 2 ವರ್ಷ ಅಥವಾ ಕನಿಷ್ಟ 1 ವರ್ಷ ಸೇವೆ ಸಲ್ಲಿಸಿದ ಅನುಭವವಿರಬೇಕು. ಗುತ್ತಿಗೆ ನೇಮಕಾತಿ ಸಿಬ್ಬಂದಿಗಳ ಸೇವಾವಧಿ ಗರಿಷ್ಟ ವಯೋಮಿತಿ 65 ವರ್ಷಗಳಾಗಿದ್ದು, ಸದರಿ ಅಭ್ಯರ್ಥಿಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸಧೃಡರಾಗಿರಬೇಕು. ಅರ್ಜಿಯನ್ನು ಸೆಪ್ಟಂಬರ್ 21 ರಿಂದ ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಜತಾದ್ರಿ, ಮಣಿಪಾಲ ಇವರಿಗೆ ಅಕ್ಟೋಬರ್ 3 ರ ಒಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 0820-2574964 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.