ಉಡುಪಿ: ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ವಾರ್ತಾಲಾಪ – ಉಡುಪಿ ಮಾಧ್ಯಮ ಪ್ರತಿನಿಧಿಗಳಿಗೆ ಕಾರ್ಯಾಗಾರವು ಫೆಬ್ರವರಿ 24 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ.ವೈ ರಾಘವೇಂದ್ರ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೇಂದ್ರ ಸರ್ಕಾರದ ವಾರ್ತಾ ಶಾಖೆ ರಾಜ್ಯದ ಹೆಚ್ಚುವರಿ ಮಹಾನಿರ್ದೇಶಕ ಎಸ್.ಜಿ ರವೀಂದ್ರ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಬಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
















