ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳು ಸ್ವಯಂ ಪ್ರೇರಿತವಾಗಿ ಜೂನ್.30ರೊಳಗೆ ಹಾಜರಾಗಬೇಕು ಎಂದು ಎನ್ಐಎ ಕೋರ್ಟ್ ಆದೇಶ ಹೊರಡಿಸಿದೆ.
ಒಂದು ವೇಳೆ ಜೂನ್.30ರೊಳಗೆ ಶರಣಾಗದಿದ್ದಲ್ಲಿ ಆರೋಪಿಗಳ ಆಸ್ತಿಯನ್ನು ಜಪ್ತಿ ಮಾಡಲಾಗುವುದು ಎಂದು ಎನ್ಐಎ ಕೋರ್ಟ್ ಹೇಳಿದೆ.
ಈ ಬಗ್ಗೆ ಸುಳ್ಯದಲ್ಲಿ ಧ್ವನಿವರ್ಧಕದ ಮೂಲಕ ಸಂದೇಶ ನೀಡಲಾಗಿದೆ.
ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಮಾಡಿದ ಆರೋಪಿಗಳ ಸುಳಿವು ಕೊಟ್ಟವರಿಗೆ ನಗದು ಬಹುಮಾನ ನೀಡುವುದಾಗಿಯೂ ಘೋಷಿಸಲಾಗಿದೆ.
2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 21 ಅರೋಪಿಗಳನ್ನು ಬಂಧಿಸಿದ್ದು,ಅವರ ವಿರುದ್ದ ಚಾರ್ಜ್ಶೀಟ್ ಸಲ್ಲಿಸಲಾಗಿದೆ.
ಏತನ್ಮಧ್ಯೆ, ಸುಳ್ಯದ ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಮತ್ತು ಬೆಳ್ಳಾರೆಯ ಮುಸ್ತಫ ಮನೆಗೆ ಎನ್ಐಎ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ ಎನ್ನಲಾಗಿದೆ.