ಉಡುಪಿ: ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳಲಿರುವ ವೇದ ಮಾತೆ ಗಾಯತ್ರಿ ದೇವಿಯ ನೂತನ ಶಿಲಾಮಯ ಗುಡಿಗೆ ನಿಧಿ ಕುಂಭ ಪ್ರತಿಷ್ಠಾಪನಾ ಮಹೋತ್ಸವ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಮಾ.28 ರಂದು ನೆರವೇರಲಿದೆ.
ಈ ಪ್ರಯುಕ್ತ ಕ್ಷೇತ್ರದಲ್ಲಿ ರುದ್ರಯಾಗವನ್ನು ಕೂಡ ಹಮ್ಮಿಕೊಳ್ಳಲಾಗಿದೆ.
ಈ ನಿಧಿ ಕುಂಭದಲ್ಲಿ ಭಕ್ತರು ತಮ್ಮ ಕೈಲಾದಷ್ಟು ಚಿನ್ನ ಬೆಳ್ಳಿ ನವರತ್ನಗಳನ್ನು ಸಮರ್ಪಿಸಲು ಅವಕಾಶವಿದೆ. ಭಕ್ತರು ನಗದು ರೂಪದಲ್ಲಿಯೂ ದೇಣಿಗೆಯನ್ನು ನೀಡಬಹುದು. ಈ ಮಹತ್ ಕಾರ್ಯದಲ್ಲಿ ಭಕ್ತರೆಲ್ಲ ಪಾಲ್ಗೊಂಡು ಗಾಯತ್ರಿ ದೇವಿಯ ಅನುಗ್ರಹಕ್ಕೆ ಪಾತ್ರರಾಗಬಹುದು ಎಂದು ಕ್ಷೇತ್ರದ ಪ್ರಕಟಾಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರದ ಉಸ್ತುವರಿ ಕುಸುಮ ನಾಗರಾಜ್ ಇವರನ್ನು ಮೊಬೈಲ್ ಸಂಖ್ಯೆ 9342749650 ರಲ್ಲಿ ಸಂಪರ್ಕಿಸಬಹುದು.
ಗೂಗಲ್ ಪೇ: 9342749650