ಡಿ. 28ರಿಂದ ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ: ಸಚಿವ ಡಾ. ಸುಧಾಕರ್

ಬೆಂಗಳೂರು: ಒಮಿಕ್ರಾನ್​ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡಿಸೆಂಬರ್ 28ರಿಂದ ನೈಟ್​ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆ ವರೆಗೂ 10 ದಿನಗಳ ಕಾಲ ನೈಟ್​ ಕರ್ಫ್ಯೂ ಜಾರಿ ಇರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಿತು. ಸಭೆಯ ಬಳಿಕ ಮಾಧ್ಯಮಗಳಿಗೆ ಡಾ. ಕೆ ಸುಧಾಕರ್ ಮಾಹಿತಿ ನೀಡಿದರು.

ಸಾರ್ವಜನಿಕ‌ ಸ್ಥಳಗಳಲ್ಲಿ ರಾತ್ರಿ ಹೊಸವರ್ಷಾಚರಣೆ ಆಚರಿಸುವಂತಿಲ್ಲ. ಸಭೆ ಸಮಾರಂಭಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.  ಅಲ್ಲದೇ ಹಗಲಿನಲ್ಲೂ ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಮಿತಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ 50:50 ನಿಯಮ ಜಾರಿಗೊಳಿಸಿದ ರಾಜ್ಯ ಸರ್ಕಾರ,  ಸಿನಿಮಾ ಥಿಯೇಟರ್​ಗಳಿಗೆ ಸದ್ಯ ಈ ನಿಮಯ ಅನ್ವಯವಾಗಲ್ಲ ಎಂದು ತಿಳಿಸಿದೆ.