ಅಗತ್ಯವಿದ್ದರೆ ನೈಟ್ ಕರ್ಫ್ಯೂ: ಸಿಎಂ ಬೊಮ್ಮಾಯಿ

ಬೆಂಗಳೂರು: ಕೊರೊನಾ ರೂಪಾಂತರ ವೈರಾಣು ಓಮೈಕ್ರಾನ್‌ ರಾಜ್ಯದಲ್ಲಿ ಪತ್ತೆಯಾಗಿರುವುದು ಮತ್ತು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಹೊಸ ಮಾರ್ಗಸೂಚಿ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.

ಕೋವಿಡ್‌ ನಿಯಂತ್ರಣ ಕುರಿತು ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಒಂದು ವೇಳೆ ರಾತ್ರಿ ಕರ್ಫ್ಯೂ ವಿಧಿಸುವ ಅಗತ್ಯವಿದ್ದರೆ ಅದನ್ನು ಜಾರಿಗೊಳಿಸಲು ಸರ್ಕಾರ ಮುಕ್ತವಾಗಿದೆ. ಕೋವಿಡ್‌ ಸ್ಥಿತಿಗತಿಗೆ ಅನುಗುಣವಾಗಿ ಸೂಕ್ತ ಕ್ರಮ ತೆಗೆದುಕೊಳ್ಳಲು ಸಿದ್ಧರಿದ್ದೇವೆ ಎಂದು ಹೇಳಿದರು.