ಉಡುಪಿ: ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಕೆ. ರಘುಪತಿ ಭಟ್ ಹೇಳಿದರು.
ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಸಮಗ್ರ ಜೀರ್ಣೋದ್ಧಾರ ಕಾಮಗಾರಿಯನ್ನು ವೀಕ್ಷಿಸಿ ಸೂಕ್ತ ಮಾರ್ಗದರ್ಶನ ನೀಡಿ ಮಾತನಾಡಿದರು.
ಯಾವುದೇ ಪಕ್ಷಭೇದವಿಲ್ಲದೆ ಕ್ಷೇತ್ರದ ಭಕ್ತನಾಗಿ ತನ್ನಿಂದಾಗುವ ಎಲ್ಲಾ ಸಹಕಾರವನ್ನು ನೀಡಲು ಸಿದ್ಧ ಎಂದರು.
ಕ್ಷೇತ್ರದ ಅಭಿವೃದ್ಧಿಯಲ್ಲಿ ಸರ್ವರೂ ಭಾಗಿಗಳಾಗಿ, ಆದಷ್ಟು ಬೇಗ ಜೀರ್ಣೋದ್ದಾರಗೊಲ್ಲುವಂತಾಗಲಿ ಎಂದು ಶುಭ ಹಾರೈಸಿದರು.
ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಚೇರ್ಕಾಡಿ ಪಂಚಾಯತ್ ಅಧ್ಯಕ್ಷ ಹರೀಶ್ ಶೆಟ್ಟಿ, ಮಾಜಿ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್, ಅರ್ಚಕ ಕೃಷ್ಣ ಅಡಿಗ, ವ್ಯವಸ್ಥಾಪನಾ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು. ಸಮಿತಿ ಅಧ್ಯಕ್ಷ ರಘುರಾಮ ಮಧ್ಯಸ್ಥ ಅವರು ಪ್ರಸ್ತಾವನೆಗೈದರು.