ಪ.ಜಾತಿ/ ಪ.ಪಂ.ದ ನಿರುದ್ಯೋಗ ಯುವಕ/ ಯುವತಿಯರಿಗೆ ವಿವಿಧ ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿ

ಉಡುಪಿ: ಕರ್ನಾಟಕದ ಏಕೈಕ ಕೇಂದ್ರೀಯ ಪ್ಲಾಸ್ಟಿಕ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ, ಮೈಸೂರು ಕಾಲೇಜಿನಲ್ಲಿ 2018-19 ನೇ ಸಾಲಿನ ಉಡುಪಿ ಜಿಲ್ಲೆಯ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳಿಗೆ ಸೇರಿದ ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ ಊಟ, ವಸತಿ ಹಾಗೂ ಮಾಸಿಕ 500 ರೂ. ಶಿಷ್ಯ ವೇತನ, ತರಬೇತಿ ನಂತರ ಉದ್ಯೋಗಾವಕಾಶ ಕಲ್ಪಿಸಿ ಕೊಡಲಾಗುವುದು. ತರಬೇತಿ ಅವಧಿಯು 6 ತಿಂಗಳಾಗಿದ್ದು, ಸದರಿ ತರಬೇತಿಗೆ ಕನಿಷ್ಟ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ, ಐಟಿಐ, ಡಿಪ್ಲೋಮಾ, ಡಿಗ್ರಿ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.
ಅಭ್ಯರ್ಥಿಗಳು ನೇರ ಆಯ್ಕೆಗೆ ಮಾರ್ಚ್ 22 ರಂದು ಸಂಜೆ 5 ರ ಒಳಗೆ ಸಿ.ಐ.ಪಿ.ಇ.ಟಿ, ಹೆಬ್ಬಾಳ್ ಇಂಡಸ್ಟ್ರಿಯಲ್ ಏರಿಯಾ, ಮೈಸೂರು ಇಲ್ಲಿಗೆ ಅಂಕಪಟ್ಟಿ (ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಗ್ರಿ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಫೋಟೋ 5, ಮೂಲ ದಾಖಲಾತಿಗಳೊಂದಿಗೆ 18 ರಿಂದ 35 ವರ್ಷದ ಅಭ್ಯರ್ಥಿಗಳು ಸೇರ್ಪಡೆಗೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಿ.ಐ.ಪಿ.ಇ.ಟಿ, ಹೆಬ್ಬಾಳ್ ಇಂಡಸ್ಟ್ರಿಯಲ್ ಏರಿಯಾ, ಮೈಸೂರು, ದೂರವಾಣಿ ಸಂಖ್ಯೆ: 0821-2510618, 2511903, ಮೊ.ನಂ: 9632688884/ 8762342432/ 9466146001 ಅನ್ನು ಸಂಪರ್ಕಿಸುವಂತೆ ಕೇಂದ್ರೀಯ ಪ್ಲಾಸ್ಟಿಕ್ಸ್ ತಂತ್ರಜ್ಞಾನ ಸಂಸ್ಥೆಯ ಪ್ರಕಟಣೆ ತಿಳಿಸಿದೆ.