ಮಂಗಳೂರು: ಅ.9 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರದ ಪುಷ್ಪದೀಪ ಶಿಕ್ಷಣ ಸಂಸ್ಥೆಯ ನಿಶ್ಚಿತ ಪೂಜಾರಿ ಅವರಿಗೆ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್
ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿಯನ್ನು ಐಟಿಬಿಟಿ ಮತ್ತು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ಪ್ರದಾನ ಮಾಡಿದರು.
ಪ್ರಸ್ತುತ ಅವರು ಹಾರ್ವರ್ಡ್ ಫೈರ್ ಮತ್ತು ಸೇಫ್ಟಿ ವಿದ್ಯಾಲಯದ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.
ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.