ನಿಟ್ಟೆ: ಅ.22 ರಂದು ಬೀದರ್ನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮಟ್ಟದ ಕ್ರೀಡಾಕೂಟದಲ್ಲಿ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ 38 ಮಂದಿ ಕ್ರೀಡಾಪಟುಗಳ ತಂಡವು ಪಥಸಂಚಲನ ಸ್ಪರ್ಧೆಯಲ್ಲಿ ಚ್ಯಾಂಪಿಯನ್ಶಿಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಡಿಯಲ್ಲಿ ಬರುವ ೧೨೨ ತಾಂತ್ರಿಕ ಕಾಲೇಜುಗಳು ಈ ಪಥಸಂಚಲನದಲ್ಲಿ ಪಾಲ್ಗೊಂಡಿದ್ದವು.