ನಿಟ್ಟೆ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಬೆಂಗಳೂರಿನ ಎಂಸ್ಕ್ರಿಪ್ಟ್ಸ್ ಸಿಸ್ಟಮ್ಸ್ ಇಂಡಿಯಾ ಪ್ರೈ.ಲಿ ನಡುವಿನ ಶೈಕ್ಷಣಿಕ ಒಪ್ಪಂದದ ಹಸ್ತಾಂತರ ಕಾರ್ಯಕ್ರಮವು ಸೆ.24 ರಂದು ಕಾಲೇಜಿನಲ್ಲಿ ನಡೆಯಿತು.
ಒಪ್ಪಂದದ ಪ್ರಮಾಣಪತ್ರಕ್ಕೆ ನಿಟ್ಟೆ ತಾಂತ್ರಿಕ ಕಾಲೇಜಿನ ವತಿಯಿಂದ ಪ್ರಾಂಶುಪಾಲ ಡಾ| ನಿರಂಜನ್ ಎನ್.ಚಿಪ್ಳೂಣ್ಕರ್ ಹಾಗೂ ಎಂಸ್ಕ್ರಿಪ್ಟ್ಸ್ ಸಿಸ್ಟಮ್ಸ್ ಇಂಡಿಯಾ ಪ್ರೈ.ಲಿ ವತಿಯಿಂದ ಕಂಟ್ರಿಮ್ಯಾನೇಜರ್ ಮತ್ತು ಇಂಜಿನಿಯರಿಂಗ್ ವಿಭಾಗದ ಉಪಾಧ್ಯಕ್ಷ ಶ್ರೀ ಮಹೇಶ್ ಶ್ರೀವಾತ್ಸವ್ ಸಹಿಹಾಕಿದರು.
ಈ ಸಂದರ್ಭದಲ್ಲಿ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಉಪಪ್ರಾಂಶುಪಾಲ ಡಾ| ಐ ಆರ್ ಮಿತ್ತಂತಾಯ, ಡಾ| ಶ್ರೀನಿವಾಸ ರಾವ್ ಬಿ.ಆರ್, ಪ್ಲೇಸ್ಮೆಂಟ್ ವಿಭಾಗದ ಮುಖ್ಯಸ್ಥೆ ಪ್ರೊ.ಶಾಲಿನಿ ಶರ್ಮ, ಕಂಪ್ಯೂಟರ್ಸೈನ್ಸ್ ವಿಭಾಗ ಮುಖ್ಯಸ್ಥ ಡಾ| ಉದಯಕುಮಾರ್ ರೆಡ್ಡಿ, ವಿವಿಧ ವಿಭಾಗಗಳ ಪ್ಲೇಸ್ಮೆಂಟ್ ಕಾರ್ಡಿನೇಟರ್ಗಳು ಉಪಸ್ಥಿತರಿದ್ದರು. ಈ ಒಪ್ಪಂದವು ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಯ ಬಗೆಗಿನ ತರಬೇತಿಯ ದೃಷ್ಟಿಯಿಂದ, ಪ್ರಾಧ್ಯಾಪಕರಿಗೆ ಪಠ್ಯಕ್ರಮಗಳ ಅಭಿವೃದ್ಧಿಯ ಬಗೆಗೆ ಚಿಂತಿಸಲು ಹಾಗೂ ಎಂಸ್ಕ್ರಿಪ್ಟ್ಸ್ ಸಿಸ್ಟಮ್ಸ್ ಇಂಡಿಯಾ ಪ್ರೈ.ಲಿ ಸಂಸ್ಥೆಗೆ ಲಾಭದಾಯಕವಾಗಲಿದೆ ಎಂದು ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ| ನಿರಂಜನ್ ಎನ್ ಚಿಪ್ಳೂಣ್ಕರ್ ತಿಳಿಸಿದ್ದಾರೆ.