ನಿಟ್ಟೆ ಇಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕಿ ಪದ್ಮಾವತಿ ಕೆ ಅವರಿಗೆ ಡಾಕ್ಟರೇಟ್

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕಿ ಪದ್ಮಾವತಿ ಕೆ ಅವರು ‘ಕಂಪ್ಯೂಟರ್ ಏಯ್ಡೆಡ್ ಡಯಗ್ನೋಸಿಸ್ ಬೇಸ್ಡ್ ಆನ್ ಫ್ಯೂಶನ್ ಆಫ್ ಮಲ್ಟಿಮೋಡಲ್ ಡಾಟಾ’ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿಯನ್ನು ನೀಡಿದೆ.

ಇವರು ಬೆಂಗಳೂರಿನ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಡಾ. ಮಾಯಾ ವಿ ಕರ್ಕಿ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆ ನಡೆಸಿದ್ದರು. ಪದ್ಮಾವತಿ ಅವರು ದಿ. ಪಿ. ಕೃಷ್ಣರಾಜ ರಾವ್ ಹಾಗೂ ಶ್ರೀಮತಿ ವಸುಂಧರಾ ಅವರ ಪುತ್ರಿ ಹಾಗು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗದ ಪ್ರಾಧ್ಯಾಪಕ ಹಾಗೂ ಸ್ಟೂಡೆಂಟ್ ವೆಲ್ಫೇರ್ ಡೀನ್ ಡಾ. ನರಸಿಂಹ ಬೈಲ್ಕೇರಿ ಅವರ ಪತ್ನಿ.