ಕೋಟೇಶ್ವರ ಕೊಡಿ ಹಬ್ಬದಲ್ಲಿ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ವಿಹಿಂಪ ಮನವಿ

ಕುಂದಾಪುರ: ಕೋಟೇಶ್ವರ ಕೋಟಿ ಲಿಂಗೇಶ್ವರ ದೇವಸ್ಥಾನದಲ್ಲಿ ಡಿ.8 ರಂದು ಕೊಡಿಹಬ್ಬ ಜಾತ್ರೆ ನಡೆಯಲಿದ್ದು, ಜಾತ್ರಯ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಆಡಳಿತಾಧಿಕಾರಿಗಳಿಗೆ ವಿಶ್ವ ಹಿಂದೂ ಪರಿಷತ್ ಮನವಿ ನೀಡಿದೆ.

ನಿರಂತರ ಹಿಂದೂಗಳ ಮೇಲೆ ಹೆಚ್ಚುತ್ತಿರುವ ಆಕ್ರಮಣ, ಲವ್ ಜಿಹಾದ್, ದೇಶದಲ್ಲಿ ದೇವಸ್ಥಾನದ ಬಾಗಿಲಿನಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಮಾಡುವವರಿಗೆ ದೇವಸ್ಥಾನಗಳ ಬಾಗಿಲಿನಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎನ್ನುವ ದೃಷ್ಟಿಯಿಂದ ಮನವಿ ಸಲ್ಲಿಸಲಾಗಿದೆ. ಹಿಂದೂ ವ್ಯಾಪಾರಿಗಳು ಮುಸ್ಲಿಂ ಉರೂಸ್ ಸಂದರ್ಭದಲ್ಲಿ ಹಿಂದೂಗಳಿಗೆ ವ್ಯಾಪಾರ ಮಾಡಲು ಅವಕಾಶ ಕೊಡುವುದಿಲ್ಲವಾದ್ದರಿಂದ ಹಿಂದೂ ವ್ಯಾಪಾರಿಗಳು ಕೂಡಾ ಈ ಬಗ್ಗೆ ಮನವಿ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ದೇವಳದ ವ್ಯವಸ್ಥಾಪನಾ ಮಂಡಳಿಗೆ ಮನವಿ ಸಲ್ಲಿಸಲಾಗಿದೆ. ಹಿಂದೂ ದೇವಸ್ಥಾನಗಳಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರ ಮಾಡಲು ಅವಕಾಶ ನೀಡಬೇಕು ಎಂದು ವಿಹಿಂಪ ಆಗ್ರಹಿಸಿದೆ.