ಉಡುಪಿ ಜಿಲ್ಲೆಯಲ್ಲಿ ಕೊರೋನ ವೈರಸ್ ಪ್ರಕರಣ ಇಲ್ಲ: ಡಿಸಿ ಸ್ಪಷ್ಟನೆ

ಉಡುಪಿ: ಜಿಲ್ಲೆಯಲ್ಲಿ ಕೊರೋನ ವೈರಸ್  ಪ್ರಕರಣ ಇಲ್ಲವೆಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಶಂಕಿತರ ವೈದ್ಯಕೀಯ ವರದಿ ನೆಗೆಟಿವ್ ಎಂದು ಬಂದಿದ್ದು, ಹೀಗಾಗಿ ಸಾರ್ವಜನಿಕರು ಯಾವುದೇ ಆತಂಕ ಪಡುವ  ಅಗತ್ಯವಿಲ್ಲವೆಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.