ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪ್ರತಿಯೊಬ್ಬ ಪ್ರಜೆಯ ಸಂವಿಧಾನ ಬದ್ದ ಹಕ್ಕು ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಮತದಾರ, ಬೂತ್ ಮಟ್ಟದ ಏಜೆಂಟ್ (BLA) ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಜಾಗರೂಕತೆ ವಹಿಸಬೇಕು ಎಂದು ರಾಜ್ಯ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ರಾದ ವಿನಯ್ ಕುಮಾರ್ ಸೊರಕೆ ಯವರು ಚಂದ್ರನಗರ ಜಾನ್ಸನ್ ಕರ್ಕೇಡ ಇವರ ಮನೆಯಲ್ಲಿ ನಡೆದ ಸರ್ ಜಾಗ್ರತೆ ಸಭೆಯಲ್ಲಿ ಕಾರ್ಯಕರ್ತರಿಗೆ ಮಾಹಿತಿ ನೀಡಿದರು.SIR ಪ್ರಕ್ರಿಯೆಯ ಉದ್ದೇಶ ಮತದಾರರ ಪಟ್ಟಿಯನ್ನು ನಿಖರ ಗೊಳಿಸುವುದಾಗಿದೆ. ಆದರೆ ಈ ಪ್ರಕ್ರಿಯೆಯ ಬಗ್ಗೆ ಅರಿವಿನ ಕೊರತೆ ಅಥವಾ ನಿರ್ಲಕ್ಷ್ಯ ಉಂಟಾದರೆ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈ ತಪ್ಪುವುದು, ಹೊಸ ಮತದಾರರು ಸೇರ್ಪಡೆಯಾಗದೆ ಉಳಿಯುವುದು. ಅಗತ್ಯ ತಿದ್ದುಪಡಿಗಳು ಆಗದೆ ಉಳಿಯುವುದು ಅಥವಾ ಅನು ಅನುಮಾನಾಸ್ಪದ ನೊಂದಣಿಗಳ ಕುರಿತು ಸಮಯಕ್ಕೆ ಆಕ್ಷೇಪಣೆ ಸಲ್ಲಿಕೆ ಯಾಗದಂತಹ ಸಮಸ್ಯೆ ಗಳು ಎದುರಾಗುವ ಸಾಧ್ಯತೆ ಇರುತ್ತದೆ ಎಂದು ಅವರು ತಿಳಿಸಿದ್ದಾರೆ. ಮಾಹಿತಿ ಶಿಬಿರದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಹಾಗೂ ಕಾಂಗ್ರೆಸ್ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಾಜೇಶ್ ಮೂಲ್ಯ, ತಾಲೂಕು ಅರೋಗ್ಯ ರಕ್ಷಾ ಕವಚ ಸಮಿತಿ ಸದಸ್ಯ ದಿವಾಕರ ಶೆಟ್ಟಿ, ಕಾಂಗ್ರೆಸ್ ನಾಯಕ ಸುಧೀರ್ ಹೆಜಮಾಡಿ, ನಿಯಾಜ್ ಪಡುಬಿದ್ರಿ ಕಾಂಗ್ರೆಸ್ ಬೂತ್ ಅಧ್ಯಕ್ಷರಾದ ಜಾನ್ಸನ್ ಕರ್ಕಡ, ಸ್ಲಾನ್ಲಿ ಲೇಸ್ ಕೊಡ್ದ, ಐರಿನ್ ತಾವ್ರೋ, ಭೂ ನ್ಯಾಯ ಮಂಡಳಿಯ ಸದಸ್ಯ ರೋಹನ್ ಕುಮಾರ್, ಆಲ್ಬರ್ಟ್ ಮೆಂಡೋನ್ಸ ಮಲoಗೋಳಿ,ವಿನಯ್ ಕುಮಾರ್ ಸೊರಕೆ ಯವರ ಆಪ್ತ ಕಾರ್ಯದರ್ಶಿ ಅಶೋಕ್ ನಾಯೆರಿ, ಭಾರತಿ ಶೆಟ್ಟಿಗಾರ್, ಕೃಷ್ಣ ಕುಲಾಲ್ ಕುತ್ಯಾರ್, ಸ್ಟಾನ್ಲಿ ಕರ್ಕಡ, ಶಶಿಕಾಂತ್ ಆಚಾರ್ಯ,ಇಬ್ರಾಹಿಂ ಕೊರಂಟಿ ಕಟ್ಟಾ, ಉಪಸ್ಥಿತರಿದ್ದರು.

















