ಪಾಕಿಸ್ತಾನಕ್ಕೆ ಸೆಟಲೈಟ್ ಕರೆ ಹೋಗಿರುವ ಬಗ್ಗೆ ಮಾಹಿತಿ ಇಲ್ಲ: ದ.ಕ ಎಸ್ಪಿ‌

ಮಂಗಳೂರು: ಪಾಕಿಸ್ತಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಿಂದ ಸೆಟಲೈಟ್  ಕರೆ ಹೋಗಿರುವ ಅಥವಾ ಪಾಕ್‌ ನಿಂದ ಕರೆ ಬಂದಿರೋ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.

ಇದೇ ವೇಳೆ ರಾಷ್ಟ್ರೀಯ ತನಿಖಾ ದಳವು ಬೆಳ್ತಂಗಡಿಯಿಂದ ಓರ್ವ ವ್ಯಕ್ತಿಯನ್ನು ಬಂಧಿಸಿರುವ ಬಗ್ಗೆಯೂ ಕೆಲ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದೆ. ಆ ರೀತಿ ಯಾವುದೇ ಬಂಧನ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಷ್ಟ್ರೀಯ ತನಿಖಾ ದಳವು ಬೆಳ್ತಂಗಡಿಯಿಂದ ಓರ್ವ ವ್ಯಕ್ತಿಯನ್ನು ದಸ್ತಗಿರಿ ಮಾಡಿರುವ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಇಂತಹ ಯಾವುದೇ ಘಟನೆಯೂ ವರದಿಯಾಗಿರುವುದಿಲ್ಲ ಹಾಗೂ ಬೆಳ್ತಂಗಡಿಯಿಂದ ಪಾಕಿಸ್ತಾಕ್ಕೆ ಕರೆ ಹೋಗಿರುವ ಅಥವಾ ಮಾಡಿರುವ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ.ಲಕ್ಷ್ಮೀಪ್ರಸಾದ್ ಸ್ಪಷ್ಟನೆಯಲ್ಲಿ ಉಲ್ಲೇಖಿಸಿದ್ದಾರೆ.