udupixpress
Home Trending ಸಂಡೆ ಇಲ್ಲ ಲೌಕ್ ಡೌನ್ ಮಂಡೆ ಬಿಸಿ: ಸರಕಾರದ ಆದೇಶ

ಸಂಡೆ ಇಲ್ಲ ಲೌಕ್ ಡೌನ್ ಮಂಡೆ ಬಿಸಿ: ಸರಕಾರದ ಆದೇಶ

ಬೆಂಗಳೂರು: ರಾಜ್ಯದ ಜನತೆಯ ಬೇಡಿಕೆ ಹಿನ್ನಲೆ ಭಾನುವಾರ( ಮೇ 31)ದಂದು ಸಂಪೂರ್ಣ ಲಾಕ್‌ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಹೀಗಾಗಿ ರಾಜ್ಯದಲ್ಲಿ ಎಲ್ಲ ದೈನಂದಿನ ಚಟುವಟಿಕೆಗಳು ಎಂದಿನಂತೆ ನಡೆಯಲಿದೆ.
ಕೋವಿಡ್‌–19 ಸೋಂಕು ಹರಡುವಿಕೆ ತಡೆಯುವ ಉದ್ದೇಶದಿಂದ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಈ ಹಂತದಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ, ಭಾನುವಾರದಂದು ಮಾತ್ರ ಸಂಪೂರ್ಣ ಲಾಕ್‌ಡೌನ್ ಇರಬೇಕು. ಅಗತ್ಯ ಸೇವೆ ಹೊರತುಪಡಿಸಿ ಬೇರೆ ಯಾವುದೇ ಚಟುವಟಿಕೆ ನಡೆಸಬಾರದು ಎಂದು ರಾಜ್ಯ ಸರ್ಕಾರ ಈ ಹಿಂದೆ ಆದೇಶಿಸಿತ್ತು.
error: Content is protected !!