ಉಡುಪಿ: ಜಿಲ್ಲೆಯಲ್ಲಿ ಮಹಿಷಾ ದಸರಾಗೆ ಸಂಬಂಧಿಸಿದಂತೆ ಪರ ಅಥವಾವಿರೋಧ ಯಾವುದೇ ರೀತಿಯ ಪ್ರತಿಭಟನಾ ಮೆರವಣಿಗೆ ಮತ್ತು ಬ್ಯಾನರ್, ಬಂಟಿಂಗ್ಸ್, ಪೋಸ್ಟರ್ ಗಳನ್ನು ಅಳವಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಕೆ. ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿ ಆದೇಶದ ಪ್ರಕಾರ ದಿನಾಂಕ:14.10.2023 ಮತ್ತು 15.10.2023 ರಂದು ಉಡುಪಿ ಜಿಲ್ಲೆಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸುಗಮ ಸಂಚಾರಕ್ಕೆ ವ್ಯತ್ಯಯ ಉಂಟಾಗುವುದರಿಂದ ಮಹಿಷ ದಸರ ಪರ /ವಿರೋಧ ಯಾವುದೇ ರೀತಿಯ ಪ್ರತಿಭಟನ ಮೆರವಣಿಗೆ, ಮತ್ತು ಬ್ಯಾನರ್, ಬಂಟಿಂಗ್ಸ್, ಪೋಸ್ಟರ್ ಗಳನ್ನು ಅಳವಡಿಸುವುದನ್ನು ನಿಷೇಧಿಸಿದ್ದಾರೆ. ಅಲ್ಲದೆ ಕೆ.ಪಿ. ಆಕ್ಟ್ 1963ರ ಕಲಂ 35 ರಡಿಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ದಿನಾಂಕ: 14.10.2023 ಬೆಳಿಗ್ಗೆ 6.00 ರಿಂದ ಜಾರಿಗೆ ಬರುವಂತೆ ಹಾಗೂ ದಿನಾಂಕ: 15.10.2023 ರ ಸಂಜೆ 06.00 ಗಂಟೆಯವರೆಗೆ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.
ನಿಷೇಧಾಜ್ಞೆಯನ್ನು ಉಲ್ಲಂಘಿಸುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.