ದ.ಕ-ಉಡುಪಿ ಜಿಲ್ಲೆಯಲ್ಲಿ ಇಂದು ಕರೆಂಟ್ ಇರಲ್ಲ; ಮೆಸ್ಕಾಂ ಮನವಿ ಏನು ಗೊತ್ತಾ?

ಮಂಗಳೂರು/ಉಡುಪಿ: ಮೆಸ್ಕಾಂ (MESCOM) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಜುಲೈ 21ರಂದು ಕರಾವಳಿಯ ಮಂಗಳೂರು, ಉಡುಪಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ವಿವಿಧ ಪ್ರದೇಶಗಳಲ್ಲಿ ಬೇರೆ ಬೇರೆ ಸಮಯದಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.

ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ?

ಮೆಸ್ಕಾಂ ಪ್ರಕಟಣೆಯ ಪ್ರಕಾರ, ನಿರ್ವಹಣಾ ಕಾಮಗಾರಿ ನಡೆಯುವ ಪ್ರದೇಶಗಳಲ್ಲಿ ನಿಗದಿತ ಅವಧಿಯಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ.

ಮಂಗಳೂರು: ಬೆಳಗ್ಗೆ 9:30ರಿಂದ ಸಂಜೆ 5:30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಮೂಡುಬಿದಿರೆ: ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಇರಲಿದೆ.

ಉಡುಪಿ ಮತ್ತು ಮಣಿಪಾಲ: ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಹಿರಿಯಡ್ಕ, ಪರ್ಕಳ, ಪೆರ್ದೂರು, ಮಂದಾರ್ತಿ ಮತ್ತು ಶಿರೂರು: ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

ಇದರ ಜೊತೆಗೆ ಕುಂದಾಪುರ, ಬೈಂದೂರು, ಕೊಲ್ಲೂರು, ಕುಂಭಾಶಿ, ಕೋಟೇಶ್ವರ ಸೇರಿದಂತೆ ಸುತ್ತಮುತ್ತಲಿನ ಹಲವು ವಸತಿ ಮತ್ತು ವಾಣಿಜ್ಯ ಪ್ರದೇಶಗಳಲ್ಲಿಯೂ ವಿದ್ಯುತ್ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.

ಸಾರ್ವಜನಿಕರಿಗೆ ಮೆಸ್ಕಾಂ ಮನವಿ

ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿರುವ ಪ್ರದೇಶಗಳ ನಿವಾಸಿಗಳು ಮತ್ತು ವ್ಯಾಪಾರಸ್ಥರು ತಮ್ಮ ದೈನಂದಿನ ಚಟುವಟಿಕೆಗಳನ್ನು ವಿದ್ಯುತ್ ಸ್ಥಗಿತದ ಸಮಯಕ್ಕೆ ಅನುಗುಣವಾಗಿ ಯೋಜಿಸಿಕೊಳ್ಳುವಂತೆ ಮೆಸ್ಕಾಂ ಮನವಿ ಮಾಡಿದೆ.

ಅಗತ್ಯವಿರುವ ಎಲೆಕ್ಟ್ರಾನಿಕ್ ಸಾಧನಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಕೊಳ್ಳುವುದು, ವಿದ್ಯುತ್ ಅವಲಂಬಿತ ಕೆಲಸಗಳನ್ನು ಮೊದಲೇ ಪೂರ್ಣಗೊಳಿಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.