ನವದೆಹಲಿ: ಕೇಂದ್ರ ಸರ್ಕಾರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಪಡಿಸಲಿದೆ ಎಂದು ಮಾಧ್ಯಮಗಳಲ್ಲಿ ವರದಿಗಳು ಹರಿದಾಡುತ್ತಿದ್ದು, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದೊಂದಿಗೆ ಸರ್ಕಾರ ವಿಲೀನಗೊಳಿಸಬಹುದು ಎಂನ್ನುವ ಊಹಾಪೋಹಗಳನ್ನು ಹರಿಯಬಿಡಲಾಗಿತ್ತು. ಮಾಧ್ಯಮಗಳಲ್ಲಿ ವರದಿಯಾದ ವದಂತಿಗಳಿಗೆ ಸರ್ಕಾರವು ಅಂತ್ಯ ಹಾಡಿದ್ದು, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ಸರ್ಕಾರವು ಸ್ಪಷ್ಟಪಡಿಸಿದೆ.
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದ್ದು, ಮಾಧ್ಯಮ ವರದಿಗೆ ಪ್ರತಿಕ್ರಿಯೆಯಾಗಿ ಸರ್ಕಾರದಿಂದ ಈ ಸ್ಪಷ್ಟನೆ ಬಂದಿದೆ. ಪಿಐಬಿ ಫ್ಯಾಕ್ಟ್ ಚೆಕ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಅಂತಹ ಯಾವುದೇ ಯೋಜನೆ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಹೇಳಿದೆ. ನಂತರ ಪಿಐಬಿ ಫ್ಯಾಕ್ಟ್ ಚೆಕ್‌ನ ಈ ಟ್ವೀಟ್ ಅನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಕೂಡ ರಿಟ್ವೀಟ್ ಮಾಡಿದ್ದಾರೆ.