ಬೆಂಗಳೂರು: ಮಕ್ಕಳ ಹಿತದೃಷ್ಟಿಯಿಂದ ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜುಗಳನ್ನು ಆರಂಭಿಸದಿರಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಇಂದು ತಜ್ಞರೊಂದಿಗೆ ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಡಿಸೆಂಬರ್ ಕೊನೆಯಲ್ಲಿ ಮತ್ತೊಮ್ಮೆ ತಜ್ಞರೊಂದಿಗೆ ಸಭೆ ನಡೆಸಿ ಬಳಿಕ ಶಾಲಾ ಆರಂಭಿಸುವ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಕೊರೊನಾ ಸೋಂಕಿನ ಕಾರಣದಿಂದಾಗಿ ಹಲವು ಪಾಲಕರು ಆತಂಕ ವ್ಯಕ್ತಪಡಿಸಿದ್ದರು. ಅಲ್ಲದೇ, ತಜ್ಞರೂ ಕೂಡ ಸಮ್ಮತಿ ಸೂಚಿಸಲಿಲ್ಲ. ಈ ಎಲ್ಲ ಕಾರಣಗಳನ್ನು ಪರಿಗಣಿಸಿ ಸಭೆಯಲ್ಲಿ ಯಾವುದೇ ಶಾಲೆ ಆರಂಭ ಮಾಡಬಾರದು ಅಂತಾ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.