ಹೈನುಗಾರಿಕೆ ತಾಣ, ಗೋಶಾಲೆಗಳ ನೋಂದಣಿಗೆ ಸೂಚನೆ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಹೈನುಗಾರಿಕೆ ತಾಣ ಹಾಗೂ ಗೋಶಾಲೆಗಳ ಬಗ್ಗೆ ಮಾಹಿತಿಯನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಜಿಲ್ಲೆಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಲ್ಲಿಸಿ, ಎಲ್ಲಾ ಹೈನುಗಾರಿಕೆ ತಾಣ ಹಾಗೂ ಗೋಶಾಲೆಗಳು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.

10 ಕ್ಕಿಂತ ಹೆಚ್ಚು ಪ್ರಾಣಿಗಳನ್ನು ಹೊಂದಿರುವ ಡೈರಿ ಫಾರ್ಮ್ಗಳು ಹಾಗೂ ಗೋಶಾಲೆಗಳನ್ನು ಸ್ಥಾಪಿಸಲು ಹಾಗೂ ಕಾರ್ಯನಿರ್ವಹಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಇವುಗಳು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸುತ್ತಿರುವ ಕುರಿತು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯು ಖಚಿತಪಡಿಸಕೊಳ್ಳಬೇಕು.

ಈ ಬಗ್ಗೆ ಹೈನುಗಾರಿಕೆ ತಾಣಗಳನ್ನು ಹಾಗೂ ಗೋಶಾಲೆಗಳನ್ನು ನಿರ್ವಹಿಸುವವರು ಒಂದು ವಾರದಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.