ಉಡುಪಿ: ಕೊರಂಗ್ರಪಾಡಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಸುತ್ತುಪೌಳಿಯ ಪಾದುಕಾನ್ಯಾಸ, ಶಿಲಾಸ್ತಂಭ ಸ್ಥಾಪನೆ, ಮಹಾದ್ವಾರನ್ಯಾಸ ಕಾರ್ಯಕ್ರಮ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂಆರ್‌ಜಿ ಗ್ರೂಪ್‌ನ ಮುಖ್ಯಸ್ಥ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಹುಟ್ಟೂರ ಸನ್ಮಾನ ಸಮಾರಂಭ ನ. 13ರಂದು ದೇಗುಲದ ಆವರಣದಲ್ಲಿ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಂದು ಬೆಳಿಗ್ಗೆ 11.08ಕ್ಕೆ ಕೆ.ಜಿ. ರಾಘವೇಂದ್ರ ತಂತ್ರಿ ಮಾರ್ಗದರ್ಶನದಲ್ಲಿ ಕೆ.ಎಸ್. ಕೃಷ್ಣಮೂರ್ತಿ ತಂತ್ರಿಯವರ ನೇತೃತ್ವದಲ್ಲಿ ಸುತ್ತುಪೌಳಿಯ ಪಾದುಕಾನ್ಯಾಸ, ಶಿಲಾಸ್ತಂಭ ಸ್ಥಾಪನೆ ಹಾಗೂ ಮಹಾದ್ವಾರನ್ಯಾಸ ಕಾರ್ಯಕ್ರಮ ನೆರವೇರಲಿದೆ ಎಂದರು.
ಬೆಳಿಗ್ಗೆ 11.30ಕ್ಕೆ ಪ್ರಕಾಶ್ ಶೆಟ್ಟಿ ಅವರ ಹುಟ್ಟೂರ ಸನ್ಮಾನ ಸಮಾರಂಭ ಜರುಗಲಿದೆ.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಉದ್ಯಮಿಗಳಾದ ಸುಧೀರ್ ವಿ. ಶೆಟ್ಟಿ, ಲತಾ ಸುಧೀರ್ ಶೆಟ್ಟಿ, ಜಗನ್ನಾಥ ಶೆಟ್ಟಿ ದೊಡ್ಡಮನೆ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾದ ಕೃಷ್ಣ ಪೂಜಾರಿ, ರಾಘವ ಕೋಟ್ಯಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಹೇಳಿದರು.
ಗೋಷ್ಠಿಯಲ್ಲಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕೆ.ಜಿ. ರಾಘವೇಂದ್ರ ತಂತ್ರಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಕೋಶಾಧಿಕಾರಿ ಸಂದೀಪ್ ಮಂಜ, ಕುಮಾರಗುರು ತಂತ್ರಿ, ಸಾಯಿನಾಥ ಶೆಟ್ಟಿ ಉಪಸ್ಥಿತರಿದ್ದರು.












