ಮಂಗಳೂರು: ಮಂಗಳೂರು ವಿಶೇಷ ಆರ್ಥಿಕ ವಲಯದಿಂದ ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗ್ರಂಥಾಲಯ ಹಾಗೂ ಮಂಗಳೂರಿನ ಪತ್ರಿಕಾಭವನದಲ್ಲಿ ಆರಂಭಿಸಲಾಗುವ ಗ್ರಂಥಾಲಯಕ್ಕೆ ಪುಸ್ತಕ ಹಸ್ತಾಂತರ ಕಾರ್ಯಕ್ರಮ ನ.9ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ.
ಮಂಗಳೂರು ವಿಶೇಷ ಆರ್ಥಿಕ ವಲಯದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸೂರ್ಯನಾರಾಯಣ ಪುಸ್ತಕಗಳನ್ನು ಹಸ್ತಾಂತರ ಮಾಡಲಿರುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮಂಗಳೂರು ವಿಶೇಷ ಆರ್ಥಿಕ ವಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಮಚಂದ್ರ ಭಂಡಾರ್ಕರ್, ದ.ಕ. ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಷಾ, ಕುತ್ಲೂರು ಶಾಲಾಭಿವೃದ್ಧಿ ಸಮಿತಿಯ ಸದಸ್ಯ ರಾಮಚಂದ್ರ ಭಟ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ ಅಧ್ಯಕ್ಷ ಕೆ. ಆನಂದ ಶೆಟ್ಟಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.