ನ.18,19:‌ ಕೇಂದ್ರ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ನವೆಂಬರ್ 18 ಹಾಗೂ 19 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ನ. 17 ರಂದು ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದು, ನ. 18 ರಂದು ಮಧ್ಯಾಹ್ನ 1.40 ಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಇಲ್ಲಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಹಾಗೂ ಮಾಹೆಯ 30 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಉಡುಪಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನ. 19 ರಂದು ಬೆಳಗ್ಗೆ 9 ಗಂಟೆಗೆ ಉಡುಪಿಯಿಂದ ಮಂಗಳೂರಿಗೆ ತೆರಳಲಿರುವರು.