ಗಣಿತನಗರ :ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಸಮಯಪ್ರಜ್ಞೆ, ಶಿಸ್ತು, ನಾಯಕತ್ವವನ್ನು ಕಲಿಸುವುದರ ಜೊತೆಗೆ ಸಹನೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅನಿಲ್ ಕುಮಾರ್‌ಜೈನ್ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಕುಕ್ಕುಂದೂರಿನ ಶ್ರೀ ದುರ್ಗಾದೇವಿ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾ.ಸೇ.ಯೋ. ಘಟಕದಿಂದ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರ -2022ರ ದಿಕ್ಸೂಚಿ ಭಾಷಣವನ್ನುದ್ದೇಶಿಸಿ ಮಾತನಾಡಿ, ಎನ್.ಎಸ್.ಎಸ್ ಜೊತೆಗಿನ ತಮ್ಮ ಸ್ವಂತ ಅನುಭವಗಳನ್ನು ಹಂಚಿಕೊಂಡು, ಎನ್.ಎಸ್.ಎಸ್ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಹಿಂದಿನ ಶಕ್ತಿಯಾಗಿ ಪಾತ್ರವಹಿಸುತ್ತದೆ ಎಂದರು.
ಶಿಬಿರವನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಆಡಳಿತ ಮಂಡಳಿ ಸದಸ್ಯ ಶಾಂತಿರಾಜ್ ಹೆಗ್ಡೆ ಉದ್ಘಾಟಿಸಿ, ಶುಭ ಹಾರೈಸಿದರು. ಕುಕ್ಕುಂದೂರಿನ ಶ್ರೀ ದುರ್ಗಾದೇವಿ ಅನುದಾನಿತ ಹಿ.ಪ್ರಾ.ಶಾಲೆಯ ಶಾಲಾ ಸಂಚಾಲಕ ರಾಜೇಂದ್ರ ಬಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಕುಕ್ಕುಂದೂರಿನ ಶ್ರೀ ದುರ್ಗಾದೇವಿ ಅನುದಾನಿತ ಹಿ.ಪ್ರಾ.ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಜಾತ ಎನ್ ರಾಜ್, ಎಸ್ .ಡಿ.ಎಂ.ಸಿ ಅಧ್ಯಕ್ಷ ಕಮಲಾಕ್ಷ ನಾಯಕ್, ಕುಕ್ಕುಂದೂರಿನ ಉದ್ಯಮಿ ತ್ರಿವಿಕ್ರಮ ಕಿಣಿ, ಕಾರ್ಕಳ ಜ್ಞಾನಸುಧಾ ಪಿಯು ಪ್ರಾಂಶುಪಾಲ ದಿನೇಶ್ ಎಂ ಕೊಡವೂರು, ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಪ್ರಾಂಶುಪಾಲೆ ಶ್ರೀಮತಿ ಉಷಾ ರಾವ್ ಯು, ಭಾಗವಹಿಸಿದ್ದರು.
ವಿದ್ಯಾರ್ಥಿ ನಾಯಕರಾದ ಪ್ರಸನ್ನ ಹಾಗೂ ಸ್ವಾತಿ ವೇದಿಕೆಯಲ್ಲಿದ್ದರು. ಕುಕ್ಕುಂದೂರು ಫ್ರೆಂಡ್ಸ್ ಮುಂಬೈನ ಪ್ರಸನ್ನಕುಮಾರ್, ಜ್ಞಾನಸುಧಾ ಅಕಾಡೆಮಿಕ್ ಡೀನ್ ಡಾ.ಮಿಥುನ್ ಯು, ಶಾಲಾ ಹಿತೈಶಿ ವಿಠಲ ಶೆಟ್ಟಿ ಉಪಸ್ಥಿತರಿದ್ದರು.
ಜ್ಞಾನಸುಧಾ ಪಿಯುಕಾಲೇಜಿನ ಸಂಸ್ಥೆಯ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಪ್ರಜ್ವಲ್ ಕುಲಾಲ್ ನಿರೂಪಿಸಿದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ರವಿ.ಜಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿ, ವಂದಿಸಿದರು.