ಕಾರ್ಕಳ: ಇಲ್ಲಿನ ಕ್ರಿಯೇಟಿವ್ ಕಾಲೇಜಿನ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.29 ರಂದು ಬೆಳಗ್ಗೆ 10 ಗಂಟೆಯಿಂದ ಹಿರ್ಗಾನ ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ನುಡಿಹಬ್ಬ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ಖ್ಯಾತ ವಾಗ್ಮಿ, ಚಿಂತಕ ಡಾ. ಹಿರೇಮಗಳೂರು ಕಣ್ಣನ್ ಭಾಗವಹಿಸಲಿದ್ದಾರೆ. ಇಂಧನ ಸಚಿವ ವಿ.ಸುನಿಲ್ ಕುಮಾರ್, ಹಿರ್ಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಶೆಟ್ಟಿ ಉಪಸ್ಥಿತರಿರಲಿದ್ದಾರೆ ಎಂದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.