ಉಡುಪಿ: ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲೆಯ ಜಿಲ್ಲಾ ಪಂಚಾಯಿತಿ
ಮತ್ತು ತಾಲೂಕು ಪಂಚಾಯಿತಿ ಸದಸ್ಯರ ಸಂಖ್ಯೆ ನಿಗದಿ ಹಾಗೂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ/ಗಡಿ
ನಿರ್ಣಯವನ್ನು ಪ್ರಕಟಿಸಿದ್ದು, ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಜನವರಿ 16 ಸಂಜೆ 5 ಗಂಟೆಯ ಒಳಗೆ ಆನ್ಲೈನ್
https://rdpr.karnataka.gov.in/rdc/public/ಮೂಲಕ ಅಥವಾ ಕರ್ನಾಟಕ ಪಂಚಾಯತ್ ರಾಜ್
ಸೀಮಾ ನಿರ್ಣಯ ಆಯೋಗ, 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ: 222/, ಬಹುಮಹಡಿ ಕಟ್ಟಡ, ಅಂಬೇಡ್ಕರ್ ವೀಧಿ, ಬೆಂಗಳೂರು ಇವರಿಗೆ ಖುದ್ದಾಗಿ ಅಂಚೆ ಮೂಲಕ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.












