ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅವ್ಯವಸ್ಥೆ ವಿರುದ್ಧ ಪ್ರತಿಭಟನೆಗೆ ತಯಾರಿ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ, ಪೋಲಿಸ್ ಅಧಿಕ್ಷಕರಿಗೆ ಹೋರಾಟ ಸಮಿತಿಯ ಪದಾಧಿಕಾರಿಗಳು ಮಂಗಳವಾರ ಮನವಿ ಸಲ್ಲಿಸಿದ್ದಾರೆ.
ನೆಲ್ಯಾಡಿ ಪರಿಸರದ ಚರ್ಚ್, ದೇವಸ್ಥಾನ, ಮಸೀದಿಗಳು, ಶಾಲಾ ಕಾಲೇಜುಗಳು ಸೇರಿದಂತೆ 47 ಸಂಘ ಸಂಸ್ಥೆಗಳು, ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದು, ಸಪ್ಟೆಂಬರ್ 30 ರ ಒಳಗಾಗಿ ರಸ್ತೆಯ ಅವ್ಯವಸ್ಥೆ ಬಗ್ಗೆ ಸ್ಪಷ್ಟ ಕಾರಣ ನೀಡುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ತಪ್ಪಿದಲ್ಲಿ ಅಕ್ಟೋಬರ್ 10 ರಂದು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸುತ್ತೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.