ಮುಂಬೈ: ದೇಶದಲ್ಲಿ ತೈಲ ಬೆಲೆ ಸತತವಾಗಿ ಏರಿಕೆಯಾಗುತ್ತಿದ್ದು, ಮೇ ತಿಂಗಳಲ್ಲೇ ಬರೋಬ್ಬರಿ 15 ಸಲ ತೈಲ ಬೆಲೆ ಹೆಚ್ಚಳವಾಗಿದೆ. ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್ಗೆ ₹100 ಗಡಿಯನ್ನು ದಾಟಿದ್ದು, ಡೀಸೆಲ್ ದರ ಲೀಟರ್ಗೆ ₹92.17ಕ್ಕೆ ಏರಿಕೆಯಾಗಿದೆ.
ದೇಶದ ಮಹಾನಗರಗಳಲ್ಲಿ ಪೆಟ್ರೋಲ್ ದರವು ಲೀಟರ್ಗೆ 26 ಪೈಸೆ ಮತ್ತು ಡೀಸೆಲ್ ದರವು ಲೀಟರ್ಗೆ 30 ಪೈಸೆ ಹೆಚ್ಚಾಗಿದೆ ಎಂದು ಭಾರತೀಯ ತೈಲ ನಿಗಮ ತಿಳಿಸಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆಯು ಲೀಟರ್ಗೆ ₹93.94 ಆಗಿದೆ. ಡೀಸೆಲ್ ದರವು ಲೀಟರ್ಗೆ ₹91.87 ಇದೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಮಹಾರಾಷ್ಟ್ರ ರಾಜ್ಯಗಳ ಹಲವು ನಗರಗಳಲ್ಲಿ ಪೆಟ್ರೋಲ್ ದರವು ಈಗಾಗಲೇ ₹ 100ರ ಗಡಿ ದಾಟಿ ಮಾರಾಟವಾಗುತ್ತಿದೆ.