ಕುಂದಾಪುರ: ಕರ್ನಾಟಕ ರಾಜ್ಯ ಜೂನಿಯರ್ ಹಾಗೂ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2022 ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಜೂನಿಯರ್ ವಿಭಾಗದ ಈಟಿ ಎಸೆತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಓಂಕಾರ್ ಕಾಮತ್ ಕಂಚಿನ ಪದಕ ಪಡೆಯುವುದರ ಮೂಲಕ ಕೀರ್ತಿಶಾಲಿಯಾಗಿದ್ದಾರೆ.
ಸಾಧನೆಗೈದ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ , ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.