ಒಂದು ತಿಂಗಳಾದರೂ ಮೀನುಗಾರರ ಯಾವುದೇ ಸುಳಿವು ಪತ್ತೆಯಾಗಿಲ್ಲ.

ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಸುವರ್ಣ ತ್ರಿಭುಜ ಬೋಟ್ ಸಹಿತ ಏಳು ಮಂದಿ ಮೀನುಗಾರರ ಕಣ್ಮರೆಯಾಗಿರುವ ಸಂಬಂಧಿಸಿದಂತೆ ಕೇರಳಕ್ಕೆ ತೆರಳಿದ್ದ ಪೊಲೀಸ್ ಹಾಗೂ ಮೀನುಗಾರರ ತಂಡ ಯಾವುದೇ ಸುಳಿವು ಲಭ್ಯವಾಗದ ಹಿನ್ನೆಲೆಯಲ್ಲಿ ವಾಪಸ್ಸು ಬಂದಿದೆ.
ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಸಮುದ್ರಕ್ಕೆ ಹೊಂದಿಕೊಂಡಿರುವ ನದಿಗಳಲ್ಲಿ ನಡೆಸಲಾಗುತ್ತಿದ್ದ ಶೋಧಕಾರ್ಯವನ್ನೂ ಯಾವುದೇ ಮಾಹಿತಿ ಸಿಗದಿರುವ ಕಾರಣಕ್ಕಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಒಂದು ತಿಂಗಳಾದರೂ ಮೀನುಗಾರರ ಪತ್ತೆ ಇಲ್ಲ:
ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಸುವರ್ಣ ತ್ರಿಭುಜ ಬೋಟ್ ಸಹಿತ ಏಳು ಮಂದಿ ಮೀನುಗಾರರ ಕಣ್ಮರೆಯಾಗಿ ಇಂದಿಗೆ ಒಂದು ತಿಂಗಳು ಪೂರ್ಣಗೊಂಡಿದೆ. ಆದರೆ ಈವರೆಗೂ ಮೀನುಗಾರರಿಗೆ ಸಂಬಂಧಿಸಿ ಯಾವುದೇ ಸುಳಿವು ಪತ್ತೆಯಾಗಿಲ್ಲ.