ಉಡುಪಿ: ಮೊದಲ ದಿನ 1 ನಾಮಪತ್ರ ಸಲ್ಲಿಕೆ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು ಬಹುಜನ ಸಮಾಜ ಪಾರ್ಟಿಯ ಕೆ.ಟಿ ರಾಧಾಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 8 ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ.