ಕಾರ್ಕಳ: ಬೈಕ್ ಹಾಗೂ ಟ್ಯಾಂಕರ್‌ ಮಧ್ಯೆ ಅಪಘಾತ, ವಿದ್ಯಾರ್ಥಿ ಸಾವು

ಕಾರ್ಕಳ: ಟ್ಯಾಂಕರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಬೈಕ್ ಸವಾರನಾಗಿದ್ದ ವಿದ್ಯಾರ್ಥಿಯು ಸ್ಥಳದಲ್ಲೇ ಮೃತಪಟ್ಟ ಘಟನೆ ಬಜಗೋಳಿ- ಮಾಳ ಹೆದ್ದಾರಿಯ ಮಾಳ ಚೆಕ್ ಪೋಸ್ಟ್ ಬಳಿ ಗುರುವಾರ ನಡೆದಿದೆ.

ಮಹಾರಾಷ್ಟ್ರ ಮೂಲದ ವೈಭವ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಸಹ ಸವಾರೆ ಕೋಲಾರ ಮೂಲದ ವಿದ್ಯಾರ್ಥಿನಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇವರಿಬ್ಬರೂ ಕರಾವಳಿ ಆಯುರ್ವೇದ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.

ವೈಭವ್ ಮತ್ತು ಇನ್ನೋರ್ವ ವಿದ್ಯಾರ್ಥಿನಿ ಹೊರನಾಡು ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದರು. ಈ ವೇಳೆ ಘಟನೆ ಸಂಭವಿಸಿದೆ. ವಿದ್ಯಾರ್ಥಿನಿಯನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.