ಬೆಂಗಳೂರು: ಎಲ್ ಕೆಜಿ, ಯುಕೆಜಿ ಹಾಗೂ 1ರಿಂದ 5 ತರಗತಿವರೆಗಿನ ಆನ್ ಲೈನ್ ಶಿಕ್ಷಣವನ್ನು ಸರ್ಕಾರ ರದ್ದುಪಡಿಸಿದೆ.
ಆನ್ ಲೈನ್ ಶಿಕ್ಷಣದ ಬಗ್ಗೆ ಸಾಕಷ್ಟು ಪರ, ವಿರೋಧ ಚರ್ಚೆಗಳು ನಡೆಯುತ್ತಿದ್ದವು. ಅಲ್ಲದೆ ಬಹುತೇಕ ಮಕ್ಕಳ ಪೋಷಕರು ಕೂಡ ಆನ್ ಲೈನ್ ಶಿಕ್ಷಣದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಸರ್ಕಾರ ಕೂಡ ಆನ್ ಲೈನ್ ಶಿಕ್ಷಣಕ್ಕೆ ನಿಷೇಧ ಹೇರಿದೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರು ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಆನ್ ಲೈನ್ ಶಿಕ್ಷಣದ ಹೆಸರಿನಲ್ಲಿ ಶುಲ್ಕ ಪಡೆಯಬಾರದು ಹಾಗೂ ವಾರ್ಷಿಕ ಶುಲ್ಕವನ್ನು ಶಿಕ್ಷಣ ಸಂಸ್ಥೆಗಳು ಹೆಚ್ಚಳ ಮಾಡಬಾರದು ಎಂದು ಅವರು ತಾಕೀತು ಮಾಡಿದ್ದಾರೆ.