ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತದ ಕನಸಿಗೆ ಪೂರಕವಾಗಿ ಉಡುಪಿ ನಗರವನ್ನು ಸ್ವಚ್ಛವಾಗಿಡಲು ಅತೀ ಕಡಿಮೆ ವೇತನದಲ್ಲಿ ಹಗಲು ರಾತ್ರಿ ಶ್ರಮಿಸುತ್ತಿರುವ ನಮ್ಮ ಪೌರ ಕಾರ್ಮಿಕರ ಮೇಲೆ ಇಂದು ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿಯ ಆಸ್ಮಾ ಎಲೆಕ್ಟ್ರಾನಿಕ್ ಅಂಗಡಿ ಮಾಲೀಕ ಹಲ್ಲೆ ಮಾಡಿರುವುದನ್ನು ಉಡುಪಿ ಜಿಲ್ಲಾ ಶ್ರೀ ರಾಮಸೇನೆಯು ತೀವ್ರವಾಗಿ ಖಂಡಿಸುತ್ತದೆ.
ಇದೊಂದು ಹಿಂದುಗಳ ಮೇಲೆ ನಡೆದ ಹಲ್ಲೆ. ಹಲ್ಲೆ ಮಾಡಿದ ವ್ಯಕ್ತಿ ಯಾರೇ ಆಗಲಿ. ಆತನನ್ಮು ಕೂಡಲೇ ಪೊಲೀಸರು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಶ್ರೀರಾಮಸೇನೆಯು ಸಂತ್ರಸ್ತ ಪೌರಕಾರ್ಮಿಕರಿಗೆ ಸಂಪೂರ್ಣ ಬೆಂಬಲವಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಲು ಆಗ್ರಹಿಸುತ್ತದೆ.
ಒಂದು ವೇಳೆ ಅರೋಪಿಗಳ ವಿರುದ್ದ ಕ್ರಮ ಜರಗಿಸದೆ ಇದ್ದರೆ ಉಗ್ರವಾದ ಹೋರಾಟವನ್ನು ಮಾಡಲಿದ್ದೇವೆ ಎಂದು ಉಡುಪಿ ಜಿಲ್ಲಾ ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು ಎಚ್ಚರಿಕೆ ನೀಡಿದ್ದಾರೆ.